ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ದ.ಕನ್ನಡ ಜಿಲ್ಲಾ ಸೆನ್ ಪೊಲೀಸ್ ಸ್ಟೇಷನ್ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇಲ್ಲಿನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಬಗ್ಗೆ ಮಾಹಿತಿ ಕಾರ್ಯಕ್ರಮವು ಡಿ.30 ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ದ.ಕನ್ನಡ ಜಿಲ್ಲಾ ಸೆನ್ ಪೊಲೀಸ್ ಸ್ಟೇಷನ್ ನ ಡಿ ವೈ ಎಸ್ ಪಿ ಮಂಜುನಾಥ್ ಬಿ ಜಿ ಹಾಗೂ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ರವರು ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಮಾತ್ರವಲ್ಲದೇ ವಿದ್ಯಾವಂತರು ಕೂಡ ಬರಲಿಯಾಗುತ್ತಿರುವ ಸೈಬರ್ ಅಪರಾಧ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.
ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿ ಸಂದೇಶ್ ರಾವ್, ಮುಂಡಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಲತಾ, ವಿವೇಕಾನಂದ ಶಿಕ್ಷಣ ಸಂಸ್ಥೆಯ ಹಿರಿಯ ಉಪನ್ಯಾಸಕಿ ಶ್ರೀಮತಿ ಗೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಉಪಸ್ಥಿತರಿದ್ದರು.
ವಿವೇಕಾನಂದ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ನಮಿತಾ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.