ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ತಕ್ಷಣ ಡಿಲೀಟ್ ಮಾಡಬೇಕು. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾರಿಗೂ ಶೇರ್ ಮಾಡಬಾರದು.
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.