24 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಸಮಸ್ಯೆ

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇ‌ರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ತಕ್ಷಣ ಡಿಲೀಟ್ ಮಾಡಬೇಕು. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾರಿಗೂ ಶೇರ್ ಮಾಡಬಾರದು.

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related posts

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!