31.3 C
ಪುತ್ತೂರು, ಬೆಳ್ತಂಗಡಿ
May 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

ಉಜಿರೆ : ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡುವೆಟ್ನಯರ ಗೌರವ ಉಪಸ್ಥಿತಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನ್ನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.2 ರಂದು ನಡೆಯಲಿದೆ.

ಕಾರ್ಯಕ್ರಮಗಳು: ಜ.1 ರಂದು ಬೆಳಿಗ್ಗೆ ಪೂರ್ವಭಾವಿ ಹೋಮಗಳು ನೆರವೇರಲಿದೆ. ಜ.2ರಂದು ಗಣಪತಿ ಹೋಮದಿಂದ ಪ್ರಾರಂಭಿಸಿ ವಿವಿಧ ಹೋಮ-ಹವನ, ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ಪಂಜುರ್ಲಿ ದೈವದ ಪದ್ಮಶಿಲಾ ಪ್ರತಿಷ್ಠಾಪನೆ, ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ.

ಭಕ್ತಾದಿಗಳಿಂದ ಹಸಿರುವಾಣಿ ಕಾಣಿಕೆ, ಹೂವು, ಹಣ್ಣು, ಕಾಯಿ, ಹಿಂಗಾರ, ನಾಗದೇವರ ಅಭಿಷೇಕಕ್ಕೆ ಹಾಲು, ಸೀಯಾಳ, ತುಪ್ಪ, ಜೇನುತುಪ್ಪ ಸ್ವೀಕರಿಸಲಾಗುವುದು. ವಿಶೇಷವಾಗಿ ಅನ್ನಸಂತರ್ಪಣೆಯ ಸೇವೆ ಮಾಡಲು ಇಚ್ಛಿಸುವವರಿಗೆ ಅವಕಾಶವಿದೆ.

Related posts

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya
error: Content is protected !!