April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

ಉಜಿರೆ: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರ ಉಪಸ್ಥಿತಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.2ರಂದು ನಡೆಯಿತು.

ಬೆಳಗ್ಗೆ ಗಣಪತಿ ಹೋಮದಿಂದ ಪ್ರಾರಂಭಿಸಿ ವಿವಿಧ ಹೋಮ-ಹವನ, ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ಪಂಜುರ್ಲಿ ದೈವದ ಪದ್ಮಶಿಲಾ ಪ್ರತಿಷ್ಠಾಪನೆ, ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿಕುಮಾರ್ ಬರಮೇಲು, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!