April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಕಳೆದ ೧೫ ವರ್ಷಗಳಿಂದ ಶಾಸ್ತ್ರೀಯ ಕನ್ನಡದ ವಿವಿಧ ಆಯಾಮಗಳಾದ ಸಾಹಿತ್ಯ, ಭಾಷೆ, ಜಾನಪದ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ, ಹಸ್ತಪ್ರತಿ, ಗ್ರಂಥ ಸಂಪಾದನೆ ಇವೇ ಮೊದಲಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಂಶೋಧನಾತ್ಮಕ ಅಧ್ಯಯನಗಳ ಮೂಲಕ ಕಾರ್ಯಪ್ರವೃತ್ತವಾಗಿದೆ.

ಈ ಚಟುವಟಿಕೆಗಳ ಭಾಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಜ.6ರಿಂದ 10ರವರೆಗೆ “ಹಳಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ” ಎಂಬ ವಿಷಯ ಕುರಿತ ಐದು ದಿನಗಳ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮವು ಉಜಿರೆಯ ಶ್ರೀ ಧ.ಮಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದ್ದು, ಜ.೬ರಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಬಸವರಾಜ ಕಲ್ಗುಡಿ ಅವರು ಕಾಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಈ ಕಾರ್ಯಗಾರದಲ್ಲಿ ನಾಡಿನ ಹೆಸರಾಂತ ವಿದ್ವಾಂಸರುಗಳಾದ ಪ್ರೊ. ಪಾದೆಕಲ್ಲು ವಿಷ್ಣು ಭಟ್ಟ, ಡಾ. ಪುಂಡಿಕಾಯ್ ಗಣಪಯ್ಯ ಭಟ್, ಪ್ರೊ. ಗುರುಪಾದ ಮರಿಗುದ್ದಿ, ಪ್ರೊ. ಶಿವಕುಮಾರಸ್ವಾಮಿ, ಪ್ರೊ. ಮಧೂರು ಮೋಹನ ಕಲ್ಲೂರಾಯ, ಡಾ. ತಿಮ್ಮಯ್ಯ, ಡಾ. ಯತೀಶ್ವರ ಸಿ. ಚ., ಡಾ. ದಿವಾಕರ ಕೆ., ಡಾ. ಮಾಲಿನಿ ಎನ್. ಅಭ್ಯಂಕರ್, ಡಾ. ಗವಿಸಿದ್ಧಯ್ಯ, ಉಜಿರೆ ಅಶೋಕ ಭಟ್, ಶ್ರೀಮತಿ ಮೇಧಾ ಕೆ. ಭಟ್, ಸುಪ್ರೀತ ಧರ್ಮಸ್ಥಳ, ಕುಮಾರಿ ಶ್ರೀವಿದ್ಯಾ ಐತಾಳ್ ಸಂಪನ್ಮೂಲ ವಿದ್ವಾಂಸರಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎಂ. ಕುಮಾರ ಹೆಗ್ಡೆ ಮತ್ತು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಮೈಸೂರು ಇಲ್ಲಿನ ಯೋಜನಾ ನಿರ್ದೇಶಕ ಪ್ರೊ. ಎನ್. ಎಂ. ತಳವಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯಿರುವವರು ಕಾರ್ಯಕ್ರಮ ಸಂಯೋಜಕರಾದ ಡಾ. ಬೋಜಮ್ಮ ಕೆ.ಎನ್. (7204245666) ಹಾಗೂ ಡಾ ನಾಗಣ್ಣ ಡಿ.ಎ. (9980240210) ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

Related posts

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!