September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ ಜ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಸೀತಾರಾಮ ಶೆಟ್ಟಿ ಕೆಂಬರ್ಜೆ, ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ, ಅರ್ಚಕ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರ ಕುಕ್ಕಪ್ಪ ಗೌಡ, ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ ಉಪಸ್ಥಿತರಿದ್ದರು.

ಗಿರೀಶ್ ಗೌಡ ನಡ ಸಾಹಿತ್ಯ, ಸ್ವಾತಿ ಗೌಡ ನಡ ಗಾಯನ, ನಿತಿನ್ ಕೋಟ್ಯಾನ್ ಉಜಿರೆ ಪ್ರಚಾರ ಕಲೆ ಮತ್ತು ಸಂಕಲನ, ದಿನೇಶ್ ಗೌಡ ಅಡ್ಡಾರು ಸಹಕಾರದಲ್ಲಿ ಆಡಿಯೋ ಮೂಡಿಬಂದಿರುತ್ತದೆ.

ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!