ಉಜಿರೆ : ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಕಾರಾಮ ಸಾಲಿಯಾನ್ ಆರ್ಲ ಡಿ. 31ರಂದು ಸೇವಾ ನಿವೃತ್ತಿ ಹೊಂದಿದರು.
ಕಲ್ಮಂಜ ಗ್ರಾಮದ ಆರ್ಲ ನಿವಾಸಿಯಾಗಿರುವ, ಬಿ.ಕಾಂ ಪದವೀಧರರಾಗಿರುವ ತುಕಾರಾಮ ಅವರು 1987ರಿಂದ 89ರವರೆಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ, 1991 ರಿಂದ ಸುಧೀರ್ಘ 33 ವರ್ಷಗಳ ಕಾಲ ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿದ್ದಾರೆ.
ಕೃಷಿಕರಾಗಿರುವ ಇವರು ಸಾಮಾಜಿಕ, ಧಾರ್ಮಿಕ, ಸಹಕಾರ ಸಂಘಗಳಲ್ಲಿ ಸಕ್ರಿಯರಾಗಿದ್ದಾರೆ. ಶ್ರೀ ರಾಮ ಕ್ಷೇತ್ರದ ಟ್ರಸ್ಟಿಯಾಗಿ, ಪರಡ್ಡ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಕಳೆದ 25 ವರ್ಷಗಳಿಂದ ಉಜಿರೆ ಮೂರ್ತೆದಾರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವುದಲ್ಲದೆ, ಹವ್ಯಾಸಿ ಕಲಾವಿದರಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.