38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ, ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಸುವರ್ಣ ದೀಪೋತ್ಸವವು ಜ.3 ರಿಂದ ಪ್ರಾರಂಭಗೊಂಡು ಜ.5 ರವರೆಗೆ ನಡೆಯಲಿದೆ.

ಇಂದು (ಜ.3) ಬೆಳಿಗ್ಗೆ ಗಣಹೋಮ, ಶ್ರೀ ಶಾಸ್ತರ ಸಹಸ್ತ ಕದಳಿಯಾಗ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೀಪೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಶಿವಪ್ರಸಾದ್ ಅಜಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಯ್ಯಪ್ಪ ದೀಪೋತ್ಸವ ಅಧ್ಯಕ್ಷ ನಾರಾಯಣ ಭಟ್ ಮುಗುಳಿ, ಟ್ರಸ್ಟಿನ ಅಧ್ಯಕ್ಷ ಶರತ್ ಕುಮಾರ್,
ಪ್ರಕಾಶ್ ಗುರು ಸ್ವಾಮಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ದಿಪೋತ್ಸವ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಚಾರ ಸಮಿತಿಯ ಅಧ್ಯಕ್ಷ ತುಕಾರಾಂ ಧನ್ಯವಾದವಿತ್ತರು.

ನಂತರ ಮಧ್ಯಾಹ್ನ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ , ಸಂಜೆ 4 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ (ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ) ರಾತ್ರಿ 8.30ಕ್ಕೆ ಧಾರ್ಮಿಕ ಸಭೆ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!