20.7 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಿಕಾ ಭವನದಲ್ಲಿ ಜ. 04 ರಂದು ನಡೆಯಿತು.

ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿಯಾಗಿ ತುಕರಾಮ್ ಬಿ, ಉಪಾಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿಯಾಗಿ ಜಾರಪ್ಪ ಪೂಜಾರಿ ಬೆಳಾಲು, ಜತೆ ಕಾರ್ಯದರ್ಶಿಯಾಗಿ ಧನಕೀರ್ತಿ ಆರಿಗ ಧರ್ಮಸ್ಥಳ ಅವರು ಅವಿರೋಧವಾಗಿ ಆಯ್ಕೆಯಾದರು.

ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಕಾರ್ಯದರ್ಶಿ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು.ವೇದಿಕೆಯಲ್ಲಿ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ, ಜತೆ ಕಾರ್ಯದರ್ಶಿ ಮನೋಹರ್ ಬಳಂಜ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಇದ್ದರು.


ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು‌ ಸಂಘದ ಹಿರಿಯ ಸದಸ್ಯ, ಆರ್.ಎನ್. ಪೂವಣಿ ನಡೆಸಿಕೊಟ್ಟರು. ನಂತರ ನಡೆದ ಕಾರ್ಯಕ್ರಮದಲ್ಲಿ ಚೈತ್ರೇಶ್ ಇಳಂತಿಲ ಹಾಗೂ ಪದಾಧಿಕಾರಿಗಳು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಬಿ.ಎಸ್ ಕುಲಾಲ್, ಮಂಜುನಾಥ ರೈ, ದೀಪಕ್ ಅಠವಳೆ, ಅಚ್ಚುಶ್ರೀ ಬಾಂಗೇರು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!