January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಜ. 3ರಂದು ನಡೆಯಿತು.

ಬೆಳ್ತಂಗಡಿಯ ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಜಂಟಿ ಸಹಯೋಗದೊಂದಿಗೆ ಆಯೋಜಿಸಲಾದ ಕಾರ್ಯಕ್ರಮವನ್ನು ಅಗ್ನಿಶಾಮಕ ದಳದ ಠಾಣಾಧಿಕಾರಿ ನೀಲಯ್ಯ ಗೌಡ ಉದ್ಘಾಟಿಸಿದರು.

ಠಾಣೆಯ ಕಛೇರಿ ಅಧಿಕಾರಿ ಉಸ್ಮಾನ್ ಅವರು ಮಾತನಾಡಿ, ವಿವಿಧ ರೀತಿಯ ಅಗ್ನಿ ಅವಘಡಗಳ ಬಗ್ಗೆ ತಿಳಿಸಿದರು. ಮಾನವ ನಿರ್ಮಿತ ಹಾಗೂ ಪ್ರಾಕೃತಿಕ ವಿಕೋಪದಿಂದ ಆಗುವ ಅವಘಡ ಕುರಿತು ವಿವಿಧ ಘಟನೆಗಳ ಕುರಿತು ವಿವರಿಸಿದರು.

ಬಾತ್ ರೂಂಗಳಲ್ಲಿ ಗ್ಯಾಸ್ ಗೀಸರ್ ನಿಂದ ಉಂಟಾಗುವ ‘ಸ್ವೀಟ್ ಡೆತ್’ ಬಗ್ಗೆ ವಿವರಿಸಿದರು. ನೀರು ಬಿಸಿಯಾಗುವ ಪ್ರಕ್ರಿಯೆಯಲ್ಲಿ ಹೊರಸೂಸುವ ಕಾರ್ಬನ್ ಮಾನಾಕ್ಸೈಡ್ ನಿಧಾನವಾಗಿ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಸಾವಿಗೆ ಕಾರಣವಾಗುವ ಬಗ್ಗೆ ತಿಳಿಸಿದರಲ್ಲದೆ, ಗೀಸರ್, ಗ್ಯಾಸ್ ಸಿಲಿಂಡರ್ ಗಳನ್ನು ಸ್ನಾನದ ಕೊಠಡಿಯ ಹೊರಗೆ ಅಥವಾ ಮನೆಯ ಹೊರಗೆ ಅಳವಡಿಸುವಂತೆ ಸಲಹೆ ನೀಡಿದರು.

ಮನೆಯ ಹೊರಗಡೆ ಕಸದ ರಾಶಿಗಳಿಗೆ ಬೆಂಕಿ ಕೊಟ್ಟಾಗ, ವಿದ್ಯುತ್ ಅವಘಡ ಸಂಭವಿಸಿದಾಗ, ಬಾವಿಗೆ ಇಳಿಯುವಾಗ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಿದರು. ಅಗ್ನಿ ಅವಘಡ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು.ಅಗ್ನಿಶಾಮಕ ದಳದ ಇತರ ಸಿಬ್ಬಂದಿ ಹಾಗೂ ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಚಾರ್ಯ ಸಂತೋಷ ಸಲ್ದಾನ ವಂದಿಸಿದರು.

Related posts

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!