September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಜ. 3ರಂದು ನಡೆಯಿತು.

ಬೆಳ್ತಂಗಡಿಯ ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಜಂಟಿ ಸಹಯೋಗದೊಂದಿಗೆ ಆಯೋಜಿಸಲಾದ ಕಾರ್ಯಕ್ರಮವನ್ನು ಅಗ್ನಿಶಾಮಕ ದಳದ ಠಾಣಾಧಿಕಾರಿ ನೀಲಯ್ಯ ಗೌಡ ಉದ್ಘಾಟಿಸಿದರು.

ಠಾಣೆಯ ಕಛೇರಿ ಅಧಿಕಾರಿ ಉಸ್ಮಾನ್ ಅವರು ಮಾತನಾಡಿ, ವಿವಿಧ ರೀತಿಯ ಅಗ್ನಿ ಅವಘಡಗಳ ಬಗ್ಗೆ ತಿಳಿಸಿದರು. ಮಾನವ ನಿರ್ಮಿತ ಹಾಗೂ ಪ್ರಾಕೃತಿಕ ವಿಕೋಪದಿಂದ ಆಗುವ ಅವಘಡ ಕುರಿತು ವಿವಿಧ ಘಟನೆಗಳ ಕುರಿತು ವಿವರಿಸಿದರು.

ಬಾತ್ ರೂಂಗಳಲ್ಲಿ ಗ್ಯಾಸ್ ಗೀಸರ್ ನಿಂದ ಉಂಟಾಗುವ ‘ಸ್ವೀಟ್ ಡೆತ್’ ಬಗ್ಗೆ ವಿವರಿಸಿದರು. ನೀರು ಬಿಸಿಯಾಗುವ ಪ್ರಕ್ರಿಯೆಯಲ್ಲಿ ಹೊರಸೂಸುವ ಕಾರ್ಬನ್ ಮಾನಾಕ್ಸೈಡ್ ನಿಧಾನವಾಗಿ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಸಾವಿಗೆ ಕಾರಣವಾಗುವ ಬಗ್ಗೆ ತಿಳಿಸಿದರಲ್ಲದೆ, ಗೀಸರ್, ಗ್ಯಾಸ್ ಸಿಲಿಂಡರ್ ಗಳನ್ನು ಸ್ನಾನದ ಕೊಠಡಿಯ ಹೊರಗೆ ಅಥವಾ ಮನೆಯ ಹೊರಗೆ ಅಳವಡಿಸುವಂತೆ ಸಲಹೆ ನೀಡಿದರು.

ಮನೆಯ ಹೊರಗಡೆ ಕಸದ ರಾಶಿಗಳಿಗೆ ಬೆಂಕಿ ಕೊಟ್ಟಾಗ, ವಿದ್ಯುತ್ ಅವಘಡ ಸಂಭವಿಸಿದಾಗ, ಬಾವಿಗೆ ಇಳಿಯುವಾಗ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಿದರು. ಅಗ್ನಿ ಅವಘಡ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು.ಅಗ್ನಿಶಾಮಕ ದಳದ ಇತರ ಸಿಬ್ಬಂದಿ ಹಾಗೂ ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಚಾರ್ಯ ಸಂತೋಷ ಸಲ್ದಾನ ವಂದಿಸಿದರು.

Related posts

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಗ್ಯಾಸ್ ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya
error: Content is protected !!