ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಜ.4 ಮತ್ತು5 ರಂದು ನಡೆಯಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲ ವಹಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಅಮೃತ ಮಹೋತ್ಸವ ಸಮಿತಿಯ ಗೌರವ ಅಧ್ಯಕ್ಷ ರಮೇಶ್ ರಾವ್ ಕೊಡಂಗೆ, ನಿಡ್ಲೆ ಸಿಆರ್ ಪಿ ಪ್ರತೀಮಾ, ಪಂಚಾಯತ್ ಸದಸ್ಯರಾದ ಶೈಲಜಾ, ವಿಜಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ., ರುಕ್ಮಯ್ಯ ಪೂಜಾರಿ, ಶಿವರಾಮ್ ರಾವ್ ಕೊಡಂಗೆ, ಅಮೃತ ಮಹೋತ್ಸವ ಸಮಿತಿ ಕೋಶಾಧಿಕಾರಿ ಕೃಷ್ಣ ಕುಮಾರ್ ಕಾಟ್ಲ, ಜ್ಯೋತಿ ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಿವರಂಜನ್ ಅಠವಳೆ, ಶಾಲಾ ನಾಯಕ ಮಿಥುನ್ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ಶಾಲೆಯ ಹಿರಿಯ ವಿದ್ಯಾರ್ಥಿಗಳಿಗೆ, 2022-23ನೇ ಹಾಗೂ 8ನೇ ತರಗತಿಯ ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಶಾಲೆಯ ಹಿರಿಯ ವಿದ್ಯಾರ್ಥಿಗಳಿಗೆ. Inspire Awardಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಅಮೂಲ್ಯ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ ನಡೆಯಿತು.
ಈ ವೇಳೆ ಅಮೃತ ಮಹೋತ್ಸವ ಸಮಿತಿ , ಶಾಲಾ ಸಮಿತಿ ವತಿಯಿಂದ ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಿಕ್ಷಣಾಧಿಕಾರಿ ತಾರಕೇಸರಿ , ಪಂ.ಅ.ಅ ದಿನೇಶ್ , ಅಧ್ಯಕ್ಷೆ ಶ್ಯಾಮಲಾ, ವಿಜಯ ಶೈಲಜಾ, ಸಿಆರ್ ಪಿ ಪ್ರತಿಮಾ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ, ಎಸ್.ಡಿ.ಎಂ.ಸಿ. ಸಮಿತಿ, ಸಂಘ ಸಂಸ್ಥೆಗಳಾದ ನಿಸರ್ಗ ಯುವಜನೇತರ ಮಂಡಲ , ಪ್ರಗತಿ ಬಂಧು ಒಕ್ಕೂಟ ಬರೆಂಗಾಯ, ವನದುರ್ಗಾ ಕ್ರೀಡಾ ಸಂಘ ಬರೆಂಗಾಯ , ಹಾಲು ಉತ್ಪಾದಕರ ಸೇವಾ ಸಂಘ ಬರೆಂಗಾಯ, ಹಿರಿಯ ವಿದ್ಯಾರ್ಥಿ ಸಂಘ, ಪೋಷಕ ವೃಂದ, ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು, ಎಲ್ಲಾ ಸಮಿತಿಯ ಸರ್ವ ಸದಸ್ಯರು ಮತ್ತು ಊರ ಸಮಸ್ತ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕರು ಹಾಗೂ ಪ್ರಧಾನ ಕಾರ್ಯದರ್ಶಿ ಗೋಪಾಲ್ ಸ್ವಾಗತಿಸಿ , ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪ್ರಾಸ್ತವಿಕ ಮಾತನಾಡಿದರು. ಸಹಶಿಕ್ಷಕ ಸ್ವಾಮಿ ಹೆಚ್.ಎಸ್ ಕಾರ್ಯಕ್ರಮ ನಿರೂಪಿಸಿದರು. ಗೀತಾ ಹೇಮಂತ್ ಕಜೆ ಧನ್ಯವಾದವಿತ್ತರು.
ಸಂಜೆ ಸಭಾ ಕಾರ್ಯಕ್ರವದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಗೌರವಾರ್ಪಣೆ ನಡೆಯಲಿದೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಪುಟಾಣಿಗಳು ಹಾಗೂ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ಹಾಗೂ ಸುದರ್ಶನ ವಿಜಯ ಮತ್ತು ನರಕಾಸುರ ಮೋಕ್ಷ ಯಕ್ಷಗಾನ ಬಯಲಾಟ ನಡೆಯಲಿದೆ.