ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜ.4 ರಿಂದ ಪ್ರಾರಂಭಗೊಂಡು ಜ.18 ರವರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಬಿ ನೆರವೇರಿಸಿದರು.
ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ಮ್ಹಾಲಕ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಥೆರಪಿ ಮಾಹಿತಿಯನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ನಗರ ಅಭಿವೃದ್ಧಿ ಕೋಶ ಮಂಗಳೂರು ಸಹಾಯಕ ಕಾರ್ಯ ಪಾಲಕ ಅಭಿಯಂತರರು ಅರುಣ್ ಕೆ , ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಪಟ್ಟಣ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಥೆರಪಿ ಸಮಯ ಪ್ರತಿ ದಿನ ಬೆಳಿಗ್ಗೆ 10:00 ರಿಂದ ಸಂಜೆ 4-00 ರವರೆಗೆ ನಡೆಯಲಿದೆ.