ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ತುಂಬಿಸಿ‌ ಎಸೆದು ಹೋಗಿರುವ ಘಟನೆ ಡಿ.17 ರಂದು ನಡೆದಿದ್ದು. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.ಈ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಜ.4 ರಂದು ಧರ್ಮಸ್ಥಳ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಆದಂ ಮಗ ಮಹಮ್ಮದ್ ಇರ್ಷಾದ್ (28) ಮತ್ತು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬದ ಸುನ್ನತ್ ಕೆರೆ ನಿವಾಸಿ ರವೂಫ್.ಎಂ.ಇಬ್ರಾಹಿಂ ಮಗ ಮಹಮ್ಮದ್ ಅಜ್ಮಲ್(30) ಬಂಧಿತ ಆರೋಪಿಗಳು.ಆರೋಪಿಗಳನ್ನು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು.ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya
error: Content is protected !!