ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಜ.4 ರಂದು ಬೆಳ್ತಂಗಡಿ ಬಿಷಪ್ ಹೌಸ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತರಾಗಿರುವ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪ್ರಸ್ತುತ ಮೂಡಬಿದಿರೆಯಲ್ಲಿ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರ ದಿಟ್ಟತನದ ಸೇವೆಯನ್ನು ವಿಶೇಷವಾಗಿ ಸ್ಮರಿಸುತ್ತ ಪರಮಪೂಜ್ಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರು ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿದ ವೃತ್ತ ನಿರೀಕ್ಷಕರಾದ ಸಂದೇಶ್ ಪಿ. ಜಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತ್ರತ್ವದಲ್ಲಿ ಮಾಡಿದ ಸನ್ಮಾನಕ್ಕೆ ವಿಶೇಷ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು ಹಾಗೂ ಧರ್ಮ ಭಗಿನಿಯರು ಉಪಸ್ಥಿತರಿದ್ದರು.