29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ವತಿಯಿಂದ ಫೆ 9 ರಂದು ನಡೆಯುವ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆಯು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಇವರ ಅಧ್ಯಕ್ಷತೆಯಲ್ಲಿ ಜ 5 ರಂದು ಸಂಘದ ವಠಾರದಲ್ಲಿ ನಡೆಯಿತು.

ಫೆ 9 ರಂದು ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಮತ್ತು ಗುರುಪೂಜೆಯನ್ನು ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ನಂತರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ 500ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಸ್ವಜಾತಿ ವಿದ್ಯಾರ್ಥಿಗಳನ್ನು ಗೌರವಿಸುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪ್ರೇಮ ಹೊಸಮನೆ, ಕಾರ್ಯದರ್ಶಿ ನಿಶ್ಮಿತಾ ಪ್ರದೀಪ್, ಸಂಘದ ಮೂರು ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಸನತ್ ಕುಮಾರ್ ಸ್ವಾಗತಿಸಿ, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!