29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

ಬಳಂಜ. ಭಾರತೀಯ ಸೇನೆಗೆ ಕಠಿಣ ತರಬೇತಿ ಪಡೆದು ಆಯ್ಕೆಗೊಂಡ ನಾಲ್ಕೂರಿನ ಮನೋಹರ್ ಪೂಜಾರಿಯವರಿಗೆ ಕುಣಿತ ಭಜನೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗೌರವಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮ ಜ.5 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿ ಮಾತನಾಡಿ ಇಚ್ಛಾಶಕ್ತಿ ಬದ್ದತೆಯಿದ್ದರೆ ಏನನ್ನೂ ಸಾಧಿಸಬಹುದೆಂಬುದಕ್ಕೆ ಮನೋಹರ್ ಪ್ರೇರಣೆ ಎಂದರು.

ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರ ಸದಾನಂದ ಸಾಲಿಯಾನ್ ರವರು ಮನೋಹರ್ ಅವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯೆಕ್ತಪಡಿದಿದರು.

ಸೇನೆಗೆ ಆಯ್ಕೆಯಾದ ಮನೋಹರ್ ಪೂಜಾರಿಯವರನ್ನು ಮಂಡಳಿಯ ವತಿಯಿಂದ ಶಾಲು,ಪೇಟ,ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಭಾರತೀಯ ಸೇನೆಗೆ ಆಯ್ಕೆ ಆಗಲು ಪಟ್ಟ ಪ್ರಯತ್ನ ಹಾಗೂ ಸವಾಲುಗಳ ಕುರಿತು ಮಂಡಳಿಯ ಸದಸ್ಯರೊಂದಿಗೆ ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಹಿರಿಯರಾದ ಮೋಹನ್ ಹೆಗ್ಡೆ ತೋಟದಪಲ್ಕೆ, ಮಂಡಳಿಯ ಸಹ ಸಂಚಾಲಕರಾದ ಪ್ರಣಾಮ್ ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಕಾರ್ಯಕ್ರಮ ನಿರೂಪಿಸಿದರು. ಮಂಡಳಿಯ ಅಧ್ಯಕ್ಷೆ ಕು.ಜ್ಯೋತಿ,ತರಬೇತುದಾರೆ ಕು.ಮಾನ್ಯ ಅನಿಸಿಕೆಗಳನ್ನು ವ್ಯಕ್ತಪಡಿಸಿದರು‌.

ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸದಸ್ಯರು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿರ್ದೇಶಕ ರಂಜಿತ್ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಉಪಸ್ಥಿತರಿದ್ದರು.

Related posts

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya
error: Content is protected !!