ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಹುಣಿಪ್ಪಾಜೆ ಗುತ್ತಿನ ರತನ್ ಕುಮಾರ್ ಜೈನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಅಕ್ಕಿ ಮಿಲ್ ನ ಮಾಲಕರು ಹಾಗೂ ಹಿರಿಯ ವಿದ್ಯಾರ್ಥಿಯಾಗಿರುವ ಶ್ಯಾಮರಾಯ ರಾವ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಮಂಟಮೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.