ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಜನವರಿ 14ರಂದು ನಡೆಯಲಿರುವ ಲಯನ್ಸ್ ಯಕ್ಷೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದಶಿ ಕಿರಣ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ದೇವಿಪ್ರಸಾದ್ ಬಲ್ಮ, ಹೇಮಂತ ರಾವ್, ಜಯರಾಮ್ ಶೆಟ್ಟಿ, ರವೀಂದ್ರ ಶೆಟ್ಟಿ, ಸದಸ್ಯರಾದ ಭುಜಬಲಿ, ನಾಣ್ಯಪ್ಪ ಉಪಸ್ಥಿತರಿದ್ದರು.