ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾಧಿಗಳಿಗೆ ಸುಸಜ್ಜಿತ ಸೌಕಾರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಇದರ ಉದ್ಘಾಟನೆ ಹಾಗೂ 2024-25 ರ ಜ್ಞಾನ ದೀಪ ಕಾರ್ಯಕ್ರಮಕ್ಕೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಜ.7 ರಂದು ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಡಾ. ಸುದೇಶ್ ಧನ್ ಕರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು, ಸಂಸದ ಬ್ರೀಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸಲಿದ್ದಾರೆ.