ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಜನವರಿ 4ರಂದು ಶಾಲಾ ವಾರ್ಷಿಕೋತ್ಸವವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನೆರವೇರಿತು.
ಮುಖ್ಯ ಅತಿಥಿಗಳಾದ ಧರ್ಮಸ್ಥಳದ ಜಮಾ ಉಗ್ರಾಣದ ನಿವೃತ್ತರಾದ ಭುಜಬಲಿಯವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶ್ರೀ ಧ .ಮಂ.ಎಜುಕೇಶನ್ ಟ್ರಸ್ಟ್ ಉಜಿರೆ ಇದರ ಕಾರ್ಯದರ್ಶಿಗಳಾದ ಸತೀಶ್ ಚಂದ್ರ ಹಾಗೂ ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭ ಕೋರಿದರು.
ಪೂಜ್ಯ ಡಾ. ಡಿ .ವೀರೇಂದ್ರ ಹೆಗಡೆ , ಡಿ ಹರ್ಷೇಂದ್ರ ಕುಮಾರ್ ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಇವರು ಶಾಲಾ ಸಂಚಿಕೆ ‘ಭಾರತಿ’ಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ನಂತರ ವಿದ್ಯಾರ್ಥಿಗಳಿಂದ ಯಕ್ಷಗಾನ ,ಭರತನಾಟ್ಯ ,ಸಂಗೀತ ಹಾಗೂ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ಜರಗಿದವು.
ವೇದಿಕೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾಗಿರುವ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರನ್ನು ಸನ್ಮಾನಿಸಲಾಯಿತು.
ಶಾಲಾ ವಾರ್ಷಿಕ ವರದಿಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಾಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಣೆಯನ್ನು ಶ್ರೀಮತಿ ಪೂರ್ಣಿಮಾ ಜೋಷಿ ಹಾಗೂ ಶ್ರೀಮತಿ ಶ್ರೀಜಾ ಎ ನೆರವೇರಿಸಿದರು.