ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿನ ವಾರ್ಷಿಕ ಪ್ರತಿಭಾ ದಿನಾಚರಣೆಯು ಜ.2 ರಂದು ನಡೆಯಿತು
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುದುವೆಟ್ಟು ಗ್ರಾ.ಪಂ. ನ ಅಧ್ಯಕ್ಷ ಪೂರ್ಣಾಕ್ಷ .ಬಿ., ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಶ್ರೀಮತಿ ಸುಜಯಾ , ಉಜಿರೆ ಮತ್ತು ನಿಡ್ಲೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ, ಪುದುವೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಯಶವಂತ್ ಗೌಡ , ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್. ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಉಪಸ್ಥಿತರಿದ್ದರು.
ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ ತಮ್ಮ ವೃತ್ತಿ ಬದುಕಿನ ಅನುಭವಗಳನ್ನು ಮೆಲುಕು ಹಾಕಿ ಶಾಲೆಯು ಬೆಳೆದು ಬಂದ ಹಾದಿಯ ಬಗ್ಗೆ ಅವಲೋಕನ ಮಾಡಿದರು. ಗ್ರಾಮೀಣ ಭಾಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿರುವ ವಾರ್ಷಿಕ ಪ್ರತಿಭಾ ದಿನಾಚರಣೆಗೆ ಶುಭಹಾರೈಸಿದರು.
ವೇದಿಕೆಯಲ್ಲಿ ಊರಿನ ಹಿರಿಯರು ಹಾಗೂ ಪ್ರಗತಿಪರ ಕೃಷಿಕ ಚಿತ್ತರಂಜನ್ ಜೈನ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ಮತ್ತು ಧರ್ಮಸ್ಥಳದ ಉದ್ಯಮಿ ರಂಜಿತ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಹಾಗೂ ಪುದುವೆಟ್ಟು ಶೌರ್ಯ ಮತ್ತು ವಿಪತ್ತು ನಿರ್ವಹಣಾ ತಂಡದ ಮುಖ್ಯಸ್ಥರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ನಂತರ ಶಾಲಾ ವತಿಯಿಂದ ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿಯವರನ್ನು ಚಿತ್ತರಂಜನ್ ಜೈನ್ ರವರು ಸನ್ಮಾನಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯದ ಮಣೆಗಾರರಾಗಿರುವ ಡಿ ವಸಂತ ಭಟ್ ರವರು ವಿದ್ಯಾರ್ಥಿಗಳಿಂದ ಅಭಿನಯಿಸಲ್ಪಟ್ಟ ಯಕ್ಷಗಾನ ಪ್ರಸಂಗ ‘ಕುಶ ಲವರ’ ಕಾಳಗವನ್ನು ನಿರ್ದೇಶಿಸಿದ ಯಕ್ಷಗಾನ ತರಬೇತುದಾರರಾದ ಅರುಣ್ ಕುಮಾರ್ ಧರ್ಮಸ್ಥಳ ಇವರನ್ನು ಗೌರವಿಸಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ನಿವೃತ್ತ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಬಿ ಸೋಮಶೇಖರ ಶೆಟ್ಟಿ ಅವರು ಶಾಲಾ ವಾರ್ಷಿಕ ಹಸ್ತ ಪತ್ರಿಕೆ ‘ಚಿಗುರು’ ನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕರ್ನಾಟಕ ವೈಭವ’ ಎಂಬ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮವನ್ನು ನಿರ್ದೇಶಿಸಿದ ಉಜಿರೆಯ ಶ್ರೀಮತಿ ಶೀಲಾ ಎಂ.ಕೆ ಮತ್ತು ತಂಡದವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಗೌರವಿಸಿದರು.
ಅತಿಥಿಗಳಾಗಿ ಆಗಮಿಸಿದ್ದ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ , ಎಸ್ ಕೆ ಡಿ ಆರ್ ಡಿ ಪಿ ಯ ಜ್ಞಾನವಿಕಾಸ ವಿಭಾಗದ ನಿರ್ದೇಶಕ ವಿಠಲ ಪೂಜಾರಿ , ಪುದುವೆಟ್ಟು ಚರ್ಚಿನ ಧರ್ಮ ಗುರುಗಳಾದ ಸೆಬಾಸ್ಟಿಯನ್ ಪುನ್ನತಾನತ್, ಉಜಿರೆ ರತ್ನಮಾನಸದ ಪಾಲಕರಾದ ಯತೀಶ್ ಕೆ ಬಳಂಜ , ಎಸ್ ಡಿ ಎಮ್. ಡಿಎಡ್ ಕಾಲೇಜಿನ ಉಪನ್ಯಾಸಕರಾದ ಮಂಜು.ಆರ್. , ಸ್ಥಳೀಯ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಗೌಡ , ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ್ ರವರು ವಿವಿಧ ಶೈಕ್ಷಣಿಕ , ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗಗಳಲ್ಲಿ ಬಹುಮಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಶುಭ ಹಾರೈಸಿದರು.
ಪುದುವೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಅಬ್ದುಲ್ ಗಫೂರ್ , ಯಶವಂತ್ ಗೌಡ , ಮಾಜಿ ಸದಸ್ಯರಾದ ರೋಯಿ ಜೋಸೆಫ್ , ರತ್ನಮಾನಸದ ಸಹಪಾಲಕ ರವಿಚಂದ್ರ ಬಿ , ಪುದುವೆಟ್ಟು ಸಿ.ಎ .ಬ್ಯಾಂಕ್ ನ ಮೆನೇಜರ್ ವಸಂತ ಎಮ್.ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಸ್ವಾಗತಿಸಿದರು. ಶ್ರೀಮತಿ ತೇಜಾವತಿ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಪವನ್ ಕುಮಾರ್ , ಶ್ರೀಮತಿ ಪುಷ್ಪಲತಾ ಮತ್ತು ಕು| ಜಿತೀಕ್ಷಾರವರು ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಶ್ರೀಮತಿ ಪುಷ್ಪಲತಾ ಧನ್ಯವಾದ ಸಮರ್ಪಿಸಿದರು.