ಅಳದಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಅಳದಂಗಡಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್, ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಧಾನ ಕಾರ್ಯದರ್ಶಿ ಪಿ.ಹೆಚ್.ನಿತ್ಯಾನಂದ ಶೆಟ್ಟಿ, ಪ್ರಮುಖರಾದ ಡಾ.ಶಶಿಧರ ಡೋಂಗ್ರೆ, ಸದಾನಂದ ಪೂಜಾರಿ ಉಂಗಿಲಬೈಲು, ಜಗನ್ನಾಥ ಶೆಟ್ಟಿ ಸುಪ್ರಭಾತ ಉಪಸ್ಥಿತರಿದ್ದರು.