24 C
ಪುತ್ತೂರು, ಬೆಳ್ತಂಗಡಿ
January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು ನಡೆಯಿತು.

ಈ ಸಂದರ್ಭದಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಂಯೋಜಕ ಪುನೀತ್ ಅತ್ತಾವರ, ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

Related posts

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!