ಉಜಿರೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 14 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶಾಲೆ ಶೇ.100 ಫಲಿತಾಂಶ ಪಡೆದಿದೆ. ವಿದ್ಯಾರ್ಥಿ ಕನಿಷ್ಕ 461, ತಶ್ವಿ 431 ಹಾಗೂ ಹಿತ 429 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್, 7 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿದ್ಯಾರ್ಥಿಗಳಿಗೆ ಚಿತ್ರಕಲಾ ಶಿಕ್ಷಕ ರವಿಚಂದ್ರ ತರಬೇತಿ ನೀಡಿರುತ್ತಾರೆ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.