ಬಂದಾರು : ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಶುಭಸಂದರ್ಭದಲ್ಲಿ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ ಜ 07 ರಂದು ನೆರವೇರಿತು.
ಪಿ.ಪ್ರಚಂಡಭಾನು ಭಟ್ ಪಾಂಬೇಲು ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ವಿವಿಧ ವೈದಿಕ ಕಾರ್ಯಕ್ರಮವನ್ನು ದೇವಳದ ಅರ್ಚಕರಾದ ಅನಂತರಾಮ ಶಬರಾಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ ,ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ,ಕಾರ್ಯದರ್ಶಿ ಉಮೇಶ್ ಗೌಡ, ಅಂಗಡಿಮಜಲು, ಉದ್ಯಮಿಗಳಾದ ಜಯಣ್ಣ ಗೌಡ ಮೀನಂದೆಲು, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಸದಸ್ಯರಾದ ಅನಿತಾ ಉದಯ ಕುರುಡಂಗೆ,ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷರಾದ ಆದಪ್ಪ ಗೌಡ, ಆಡಳಿತ ಮಂಡಳಿ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ ಸೋನಕುಮೇರು, ಡೀಕಯ್ಯ ಕoಚರೊಟ್ಟು ಹಾಗೂ ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಭಕ್ತ ವೃಂದ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.