January 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ, ಸರ್ವಧರ್ಮ ಸಮನ್ವಯ ಕ್ಷೇತ್ರವೆಂದೇ ಚಿರಪರಿಚಿತವಾಗಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ನಿರ್ಮಾಣಗೊಂಡಿದ್ದು ಜ.7 ರಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸಿದರು.

ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಡಾ. ಸುದೇಶ್ ಧನ್‌ಕರ್, ಹೇಮಾವತಿ ವೀ. ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಿ ಹರ್ಷೇಂದ್ರ ಕುಮಾರ್, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಸಕ್ತ ವರ್ಷದ ಜ್ಞಾನದೀಪ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.

ವಿಶೇಷ ಸೌಲಭ್ಯಗಳು: 2,75,177 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ “ಶ್ರೀ ಸಾನ್ನಿಧ್ಯ” ಸರತಿ ಸಾಲಿನ ಸಂಕೀರ್ಣ ಎರಡು ಅಂತಸ್ತುಗಳನ್ನು ಹೊಂದಿದ್ದು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತಾದಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ.
ಹತ್ತು ಸಾವಿರ ಜನರಿಗೆ ಆರಾಮದಾಯಕ ಆಸನ ವ್ಯವಸ್ಥೆ, ವೃದ್ಧರು, ಅಂಗವಿಕಲರು ಮತ್ತು ಮಕ್ಕಳ ಆರೈಕೆ ಕೇಂದ್ರ, ವೈದ್ಯಕೀಯ ನೆರವು, ಶೌಚಾಲಯ, ಉಪಾಹಾರ ಸೌಲಭ್ಯ, ದೂರದರ್ಶನ ಸಹಿತ ಹವಾನಿಯಂತ್ರಿತ ಸೌಲಭ್ಯ ಕಲ್ಪಿಸಲಾಗಿದೆ. ದರ್ಶನದ ಸಮಯದಲ್ಲಿ ವಿವಿಧ ಸೇವೆಗಳ ಮಾಹಿತಿ ಪಡೆಯಲು ಡಿಜಿಟಲ್ ತಂತ್ರಜ್ಞಾನ ಅಳವಡಿಸಲಾಗಿದೆ. ಕಟ್ಟಡಕ್ಕೆ ಸಂಪೂರ್ಣ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿದ್ದು, ಮರುಬಳಕೆಯ ಸೋಲಾರ್ ಇಂಧನ ಅಳವಡಿಸಲಾಗಿದೆ. ಪ್ರತಿ ಭವನದಲ್ಲಿ 800ಮಂದಿ ತಂಗಲು ಅವಕಾಶವಿರುವ 16 ವಿಶಾಲ ಭವನಗಳು “ಶ್ರೀ ಸಾನ್ನಿಧ್ಯ” ದಲ್ಲಿವೆ. ಅಲ್ಲಲ್ಲಿ ಸೂಚನಾ ಫಲಕಗಳು ಹಾಗೂ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ. ಸಂಕೀರ್ಣದ ಪ್ರವೇಶದ್ವಾರದ ಎದುರು ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಬಿಂಬಿಸುವ ಆಕರ್ಷಕ ಕಲಾಕೃತಿಗಳು ಕಣ್ಮನ ಸೆಳೆಯುತ್ತವೆ.
ದೇವರ ದರ್ಶನಕ್ಕೆ ಪ್ರಸ್ತುತ ಇರುವ ಸರತಿಸಾಲಿನ ವ್ಯವಸ್ಥೆಯನ್ನೂ ಕೆಲವು ಸುಧಾರಣೆಗಳೊಂದಿಗೆ ಮುಂದುವರಿಸಲಾಗುವುದು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!