ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ, ಸರ್ವಧರ್ಮ ಸಮನ್ವಯ ಕ್ಷೇತ್ರವೆಂದೇ ಚಿರಪರಿಚಿತವಾಗಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ನಿರ್ಮಾಣಗೊಂಡಿದ್ದು ಜ.7 ರಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸಿದರು.

ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಡಾ. ಸುದೇಶ್ ಧನ್‌ಕರ್, ಹೇಮಾವತಿ ವೀ. ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಿ ಹರ್ಷೇಂದ್ರ ಕುಮಾರ್, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಸಕ್ತ ವರ್ಷದ ಜ್ಞಾನದೀಪ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.

ವಿಶೇಷ ಸೌಲಭ್ಯಗಳು: 2,75,177 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ “ಶ್ರೀ ಸಾನ್ನಿಧ್ಯ” ಸರತಿ ಸಾಲಿನ ಸಂಕೀರ್ಣ ಎರಡು ಅಂತಸ್ತುಗಳನ್ನು ಹೊಂದಿದ್ದು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತಾದಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ.
ಹತ್ತು ಸಾವಿರ ಜನರಿಗೆ ಆರಾಮದಾಯಕ ಆಸನ ವ್ಯವಸ್ಥೆ, ವೃದ್ಧರು, ಅಂಗವಿಕಲರು ಮತ್ತು ಮಕ್ಕಳ ಆರೈಕೆ ಕೇಂದ್ರ, ವೈದ್ಯಕೀಯ ನೆರವು, ಶೌಚಾಲಯ, ಉಪಾಹಾರ ಸೌಲಭ್ಯ, ದೂರದರ್ಶನ ಸಹಿತ ಹವಾನಿಯಂತ್ರಿತ ಸೌಲಭ್ಯ ಕಲ್ಪಿಸಲಾಗಿದೆ. ದರ್ಶನದ ಸಮಯದಲ್ಲಿ ವಿವಿಧ ಸೇವೆಗಳ ಮಾಹಿತಿ ಪಡೆಯಲು ಡಿಜಿಟಲ್ ತಂತ್ರಜ್ಞಾನ ಅಳವಡಿಸಲಾಗಿದೆ. ಕಟ್ಟಡಕ್ಕೆ ಸಂಪೂರ್ಣ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿದ್ದು, ಮರುಬಳಕೆಯ ಸೋಲಾರ್ ಇಂಧನ ಅಳವಡಿಸಲಾಗಿದೆ. ಪ್ರತಿ ಭವನದಲ್ಲಿ 800ಮಂದಿ ತಂಗಲು ಅವಕಾಶವಿರುವ 16 ವಿಶಾಲ ಭವನಗಳು “ಶ್ರೀ ಸಾನ್ನಿಧ್ಯ” ದಲ್ಲಿವೆ. ಅಲ್ಲಲ್ಲಿ ಸೂಚನಾ ಫಲಕಗಳು ಹಾಗೂ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ. ಸಂಕೀರ್ಣದ ಪ್ರವೇಶದ್ವಾರದ ಎದುರು ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಬಿಂಬಿಸುವ ಆಕರ್ಷಕ ಕಲಾಕೃತಿಗಳು ಕಣ್ಮನ ಸೆಳೆಯುತ್ತವೆ.
ದೇವರ ದರ್ಶನಕ್ಕೆ ಪ್ರಸ್ತುತ ಇರುವ ಸರತಿಸಾಲಿನ ವ್ಯವಸ್ಥೆಯನ್ನೂ ಕೆಲವು ಸುಧಾರಣೆಗಳೊಂದಿಗೆ ಮುಂದುವರಿಸಲಾಗುವುದು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

Related posts

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya
error: Content is protected !!