18.8 C
ಪುತ್ತೂರು, ಬೆಳ್ತಂಗಡಿ
January 10, 2025
Uncategorized

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಮಡಂತ್ಯಾರು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು, ಜೆಸಿಐ ಮಡಂತ್ಯಾರು, ಇವರ ಜಂಟಿ ಸಹಯೋಗದೊಂದಿಗೆ ಎಜೆ ಇನ್ಸ್ಟ್‌ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಜ.5 ರಂದು ಕಲಾ ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆ಼಼ಕ್ಸ್ ಮುಖ್ಯರಸ್ತೆ ಮಡಂತ್ಯಾರು ಇಲ್ಲಿ ನಡೆಸಲಾಯಿತು.


ಕಾರ್ಯಕ್ರಮವನ್ನು ಮಡಂತ್ಯಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಶ್ರೀಮತಿ ರೂಪಾ ನವೀನ್ ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು.


ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಜೆ.ಸಿ.ಐಯ ಅಧ್ಯಕ್ಷೆ ಶ್ರೀಮತಿ ಅಮಿತಾ ಆಶೋಕ್ ಮಾತನಾಡಿ ಯಾವುದೇ ಸಹಕಾರಿ ಸಂಘವು ಆರೋಗ್ಯ ಶಿಬಿರವನ್ನು ಆಯೋಜಿಸುವುದಿಲ್ಲ, ಆದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಈ ನಿಟ್ಟಿನಲ್ಲಿ ಜನರ ಕಾಳಜಿ ವಹಿಸುತ್ತಿರುವುದು ತುಂಬಾ ಸಂತೋಷದ ವಿಷಯ ಎಂದರು.


ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅಥಿತಿಯಾದ ಮಾಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಪುನೀತ್ ಮಾತನಾಡಿ ಸಮಾಜ ಏನು ಕೊಡುತ್ತದೆ ಎಂಬ ಈ ಕಾಲದಲ್ಲಿ ನಾವು ಸಮಾಜಕ್ಕೆ ಏನು ಕೋಡಬೇಕು ಎಂಬುದನ್ನು ಆಲೋಚಿಸಿ ಸಾಮಾಜಿಕ ಕಾರ್ಯ ನಡೆಸುತ್ತಿರುವ ಈ ಸಂಸ್ಠೆ ಅಭಿವೃದ್ದಿಯಾಗಲಿ ಎಂದು ಹಾರೈಸಿದರು.
ಈ ಕಾರ್ಯಕ್ರಮದ ಇನ್ನೋರ್ವ ಅಥಿತಿಯಾದ ಸ್ಥಳೀಯ ಜುಮ್ಮಾ ಮಸೀದಿಯ ಅಧ್ಯಕ್ಷ ಶೇಕ್ ಅಬ್ದುಲ್ ಲತೀಫ್ ಸಾಹೆಬ್ ಇವರು ಮಾತನಾಡಿ ಆರೋಗ್ಯವೇ ಭಾಗ್ಯ, ಎಲ್ಲಾ ರೀತಿಯ ಸಾಧನೆಗೆ ಆರೋಗ್ಯವು ಮುಖ್ಯವಾದದ್ದು.ರೋಗದ ಸೂಚನೆ ಬಂದಾಗಲೇ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯವೆಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತಾನಾಡಿ, ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರು ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಆದುದರಿಂದ ಆರೋಗ್ಯ ತಪಾಸಣೆಯನ್ನು ಮಾಡುವುದು ಉತ್ತಮ. ಹಣವನ್ನು ಯಾವಾಗ ಬೇಕಾದರೂ ಸಂಪಾದಿಸಬಹುದು ಆದರೆ ಆರೋಗ್ಯವನ್ನು ಸಂಪಾದಿಸಿಲು ಸಾಧ್ಯವಿಲ್ಲ , ಜನರು ತಮ್ಮ ಆರೋಗ್ಯ ಕಡೆಗೆ ಗಮನವನ್ನು ಹರಿಸಬೇಕೆಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಂ, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು ಇದರ ಅಧ್ಯಕ್ಷ ಸಚಿನ್ ಕೊಡ್ಲಕ್ಕೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ,ಮಡಂತ್ಯಾರು ಶಾಖೆಯ ಶಾಖಾಧಿಕಾರಿ ಕುಮಾರಿ ಸುರಕ್ಷ ಹಾಗೂ ಮತ್ತಿತರರು ಉಪಸ್ಧಿತರಿದ್ದರು.


ಕಾರ್ಯಕ್ರಮದಲ್ಲಿ ಸುಮಾರು 350ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ ಮತ್ತು ಇ.ಸಿ.ಜಿ ತಪಾಸಣೆ ಮಾಡಲಾಯಿತು.


ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಸ್ವಾಗತಿಸಿ, ಕುಮಾರಿ ಪ್ರಜ್ಞ ವಂದಿಸಿದರು. ಕುಮಾರಿ ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya
error: Content is protected !!