38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ.: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು ಇದುವರೆಗೆ 230 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ 64 ಜಿಲ್ಲೆಗಳ ಪೈಕಿ 52 ಜಿಲ್ಲೆಗಳಲ್ಲಿ ಹಿಂದೂ ವಿರೋಧಿ ಹಿಂಸಾಚಾರದ ಘಟನೆಗಳು ನಡೆದಿವೆ. ಶೇಖ್ ಹಸೀನಾ ಸರಕಾರ ರಾಜೀನಾಮೆ ನೀಡಿದ ನಂತರ ಹಿಂದೂಗಳ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ, ಹಿಂದೂ ಯುವಕ, ಉತ್ಸವ್ ಮಂಡಲನನ್ನು ತಥಾಕಥಿತ ಧರ್ಮನಿಂಧನೆಯ ಆರೋಪದ ಮೇಲೆ ಜಿಹಾದಿ ಜನಸಮೂಹವು ನೇರವಾಗಿ ಪೊಲೀಸ್ ಠಾಣೆಗೆ ನುಗ್ಗಿ ಆ ಯುವಕನ ಎರಡೂ ಕಣ್ಣುಗಳನ್ನು ಕಿತ್ತು ಹಾಕಿದೆ. ಬಾಂಗ್ಲಾದೇಶದಲ್ಲಿ ಜಿಹಾದಿಗಳು ಹಿಂದೂಗಳನ್ನು ರಾಜಾರೋಷವಾಗಿ ಕೊಲ್ಲುವುದು, ಹಿಂದೂ ಮನೆಗಳನ್ನು ಸುಡುವುದು, ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡುವುದು, ಭೂಮಿಯನ್ನು ಕಬಳಿಸುವುದು, ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರವೂ ನಡೆಯುತ್ತಿದೆ.

ಬಹುಸಂಖ್ಯಾತ ಹಿಂದೂಗಳಿರುವ ಭಾರತ ದೇಶ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಿ ಬಾಂಗ್ಲಾದೇಶಿ ನುಸುಳುಕೋರರನ್ನು ದೇಶದಿಂದ ಹೊರಹಾಕಬೇಕು, ಬಾಂಗ್ಲಾದೇಶಿ ಉತ್ಪನ್ನಗಳನ್ನು ಬಹಿಸ್ಕರಿಸಿ, ಬಾಂಗ್ಲಾದೇಶದ ಆಕ್ರಮಣಕಾರರಿಗೆ ಸಹಾಯ ಮಾಡುವವರ ಮೇಲೆ ರಾಷ್ಟ್ರದ್ರೋಹದ ಅಪರಾಧ ದಾಖಲಿಸಬೇಕೆಂದು ಹಲವು ಫಲಕಗಳನ್ನು ಹಿಡಿದುಕೊಂಡು ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜ.08. ರಂದು ಶಾಂತಿಯುತವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲೆಕಾರ್ಡ್ಸ್ ಹಿಡಿದು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸದಾಶಿವ ಶೆಟ್ಟಿ ಅರುವ, ಪರಮೇಶ್ವರ ಎಂ, ಶ್ರೀನಿವಾಸ ಸಿ, ಬಾಲಕೃಷ್ಣ ಗೌಡ ರೆಖ್ಯ, ರಾಘವೇಂದ್ರ ಕಾಮತ್ ಉಜಿರೆ, ಸೌಮ್ಯ ಬಂದಾರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

Related posts

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya
error: Content is protected !!