ಬೆಳಾಲು : ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ಜ 08 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಸಿ ಎ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ದಿನೇಶ್ ಕೋಟ್ಯಾನ್ ಇವರನ್ನು ಶಾಲು ಹಾಕಿ ಹೂಗುಚ್ಛ ನೀಡಿ ಗೌರವಿಸಿದರು . ನಿರ್ದೇಶಕರುಗಳಾಗಿ ಆಯ್ಕೆಯಾದ ಪ್ರವೀಣ್ ವಿಜಯ್ ಹಾಗೂ ಸುರೇಂದ್ರ ಗೌಡ ಇವರನ್ನು ಹೂ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತಾರಾನಾಥ್ ನಾಯ್ಕ, ಸದಸ್ಯರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.