January 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟದ ಒಬ್ಬರು ಅಭ್ಯರ್ಥಿ ಜಯಗಳಿಸಿದ್ದಾರೆ. ಆದರೆ ಹೈಕೋರ್ಟಿನ ಆದೇಶ ಬರಬೇಕಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆ ಮಾಡದೇ ತಡೆ ಹಿಡಿದಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ
ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದ ರಾಘವೇಂದ್ರ ನಾಯಕ್, ರಾಜು ಕೆ. ಸಾಲಿಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಬೇಬಿ ಕಿರಣ್, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಕೃಷ್ಣಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಶ್ರೀಮತಿ ತಾರಾ, ಶ್ರೀಮತಿ ಗಂಗಾವತಿ, ಸಾಲಗಾರರ ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಬೇಬಿ, ಸಾಲಗಾರರ ಪ. ಪಂಗಡ ಕ್ಷೇತ್ರದಿಂದ ನಾಗೇಶ್ ಟಿ. ಜಯ ಗಳಿಸಿದ್ದಾರೆ.

ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟದ ಅಭ್ಯರ್ಥಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಎ ಧರ್ಮರಾಜ ಗೌಡ ಅಡ್ಕಾಡಿ ಜಯ ಗಳಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ರವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ನ್ಯಾಯಾಲಯದ ಆದೇಶದ ಬಳಿಕ ಘೋಷಣೆ:
ಸಹಕಾರಿ ಸಂಘದ 2 ಮಹಾಸಭೆಗೆ ಗೈರು ಹಾಜರಾದ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ. ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್ಪಿಟಿಷನ್‌ನಂತ ನ್ಯಾಯಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶವನ್ನು ಉಚ್ಚ ನ್ಯಾಯಾಲಯದ ಆದೇಶ ಬಂದ ನಂತರ ಚುನಾವಣಾಧಿಕಾರಿಗಳು ಘೋಷಣೆ ಮಾಡಲಿದ್ದಾರೆ.

Related posts

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!