September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭಸಂದರ್ಭದಲ್ಲಿ ಶ್ರೀ ಸಿದ್ದಿವಿನಾಯಕ ನೂತನ ಸಭಾಭವನದ ಉದ್ಘಾಟನಾ ಸಮಾರಂಭ ಜ 07 ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಶ್ರೀ ಸಿದ್ದಿವಿನಾಯಕ ಸಭಾಭವನದ ಉದ್ಘಾಟನೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜಾರವರು ನೆರವೇರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮಹಾಬಲ ಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶ್ರೀ ಕ್ಷೇತ್ರ ಸಮುದಾಯ ಪ್ರಾದೇಶಿಕ ಅಭಿವೃದ್ಧಿ ವಿಭಾಗ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಭಾಭವನದ ದಾನಿಗಳಾದ ಕುಕ್ಕಪ್ಪ ಗೌಡ ಕೋಡಿಮಜಲು, ಹೊನ್ನಪ್ಪ ಗೌಡ ಸೋಣಕುಮೇರು, ಶ್ರೀಮತಿ ಗಿರಿಜ ಅಂಗಡಿಮಜಲು, ಉಮೇಶ್ ಗೌಡ ಅಂಗಡಿಮಜಲು, ಡೀಕಯ್ಯ ಗೌಡ ಕoಚರೊಟ್ಟು, ಶ್ರೀಮತಿ ಕಲ್ಯಾಣಿ ಹಾರ್ತ್ಯಾರು, ಇವರುಗಳಿಗೆ ಗೌರವಪೂರ್ವಕ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ,ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ,ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಉಪಸ್ಥಿತರಿದ್ದರು.
ಶ್ರೀನಿವಾಸ ಗೌಡ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!