29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

ಉಜಿರೆ :ಇಲ್ಲಿನ ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ದ.ಕ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ಉಜಿರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಸೇವಾ ಪ್ರತಿನಿಧಿ ಶ್ರೀಮತಿ ಹೇಮಲತಾ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಬಾಬು ನಾಯ್ಕ ಮತ್ತು ಸುರೇಶ್ ನಾಯ್ಕ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕರಾದ ಸುಂದರ ಬಂಗೇರ ಮತ್ತು ಸಹ ಸಂಚಾಲಕರಾದ ಸೋಮಶೇಖರ,ಕೆ ಮತ್ತು ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ ದೇಣಿಗೆಯ ಚೆಕ್ಕನ್ನು ಸ್ವೀಕರಿಸಿದರು.

ಬದನಾಜೆ ಶಾಲೆಯಲ್ಲಿ ಮಕ್ಕಳ ಕ್ಷೀರ ಭಾಗ್ಯ, ಅಕ್ಷರ ದಾಸೋಹ, ಶಾಲಾ ಪ್ರಾರ್ಥನೆಗೆ, ಸಭೆ ಸಮಾರಂಭಗಳಿಗೆ ಅನುಕೂಲವಾಗುವಂತೆ ಸುಮಾರು 15 ಲಕ್ಷ ವೆಚ್ಚದಲ್ಲಿ ಸಭಾಂಗಣ ರಚನೆ ಕಾರ್ಯ ಪ್ರಗತಿಯಲ್ಲಿದ್ದು,ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಕೈ ಜೋಡಿಸುತ್ತಿದ್ದಾರೆ. ಶಾಲಾ ಬೇಡಿಕೆಯನ್ನು ಮನ್ನಿಸಿ ಸಭಾಂಗಣಕ್ಕೆ ದೇಣಿಗೆ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಶಿಕ್ಷಕವೃಂದ, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾಭಿಮಾನಿಗಳು ಭಕ್ತಿ ಪೂರ್ವಕ ವಂದನೆಗಳನ್ನು ಸಲ್ಲಿಸಿದರು.

Related posts

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya
error: Content is protected !!