ಉಜಿರೆ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜ.9ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.
ಮಾರ್ಗದರ್ಶನ ಅಧಿಕಾರಿಯಾಗಿ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.
ಮುಖ್ಯ ಮಂತ್ರಿ ಪದಕ ಪುರಸ್ಕೃತ ಉಪ ವಲಯ ಅರಣ್ಯಧಿಕಾರಿ ಕು. ಕಮಲಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಪ.ಜಾತಿ ಪ. ಪಂಗಡದ 580 ಕುಟುಂಬಗಲಿಗೆ ಕುರ್ಚಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ವಂದಿಸಿದರು.