ಕಳೆಂಜ : ಶ್ರೀ ಕ್ಷೇತ್ರದ ವತಿಯಿಂದ,ಕ್ಷೇತ್ರದ ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಕಳೆಂಜ ಸದಾಶಿವೇಶ್ವರ ದೇವಸ್ಥಾನದ ಸಭಾಭವನದ ರಚನೆಗೆ ಮಂಜೂರು ಮಾಡಿರುವ ರೂ. 2ಲಕ್ಷ ಮೊತ್ತದ ಮಂಜುರಾತಿ ಪತ್ರವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಆಡಳಿತ ಸಮಿತಿಯ ಅಧ್ಯಕ್ಷ ಕೆ ಶ್ರೀಧರ್ ರಾವ್ ರವರಿಗೆ ಮಂಜೂರಾತಿ ಪತ್ರವನ್ನು ಸಮಿತಿಯ ಪ್ರಮುಖರು ಹಾಗೂ ಒಕ್ಕೂಟದ ಪದಾಧಿಕಾರಿಗಳ ಸಮ್ಮುಖದಲ್ಲಿ ಹತ್ತಾಂತರಿಸಲಾಯಿತು.
ಈ ಸಂದರ್ಭ ಆಡಳಿತ ಮಂಡಳಿಯ ಕಾರ್ಯದರ್ಶಿ ಕುಸುಮಕರ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲು, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಬರಮೇಲು, ಆಡಳಿತ ಮಂಡಳಿಯ ಸದಸ್ಯ ನೀಲಯ್ಯ ಗೌಡ, ಹಿರಿಯರಾದ ಬಾಲಣ್ಣ ಗೌಡ ಬದಿಮಾರು, ರಾಮಚಂದ್ರಗೌಡ ಕೊಲಂಬೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸವಿತಾ ಬರಮೇಲು, ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಪ್ರೇಮ ಬಿ ಎಸ್, ರುಕ್ಮಯ ಗೌಡ ಬರಮೇಲು, ಗೀತಾ ಕಜೆತಕೊಡಿ, ಉಮೇಶ್ ರೈ, ಮೇಲ್ವಿಚಾರಕರಾದ ರವೀಂದ್ರ, ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.