ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಸಮಯದಲ್ಲಿ ಮೆರವಣಿಗೆಯ ಮೂಲಕ ದೇವರಿಗೆ ಬೆಳ್ಳಿ ಕವಚ ಸಮರ್ಪಣೆ ಜ.9ರಂದು ನಡೆಯಿತು.
ಶಂಕರ ಮಯ್ಯ ದಂಪತಿಗಳು ಬೆಳ್ಳಿ ಕವಚವನ್ನು ಹಿಡಿದುಕೊಂಡು ಸಾಗಿ ಬಂದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜ ಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಹೊನ್ನಪ್ಪ ಗೌಡ ಸೋಣಕುಮೇರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.