ಉಜಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಂಗಳೂರು ಇವರು ತುಮಕೂರಿನ ಇಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುಮೇಧಾ ಗಾಂವ್ಕರ್ ಅಶು ಭಾಷಣ ಸ್ಪರ್ಧೆಯಲ್ಲಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿಕ್ ಕೆ. ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.
ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಉಪ ಪ್ರಾಂಶುಪಾಲರಾದ ಡಾ. ರಾಜೇಶ್, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ನಾಗರಾಜ್ ಬಿ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.