ಉಜಿರೆ :ಇಲ್ಲಿನ ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ದ.ಕ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ಉಜಿರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಸೇವಾ ಪ್ರತಿನಿಧಿ ಶ್ರೀಮತಿ ಹೇಮಲತಾ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಬಾಬು ನಾಯ್ಕ ಮತ್ತು ಸುರೇಶ್ ನಾಯ್ಕ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕರಾದ ಸುಂದರ ಬಂಗೇರ ಮತ್ತು ಸಹ ಸಂಚಾಲಕರಾದ ಸೋಮಶೇಖರ,ಕೆ ಮತ್ತು ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ ದೇಣಿಗೆಯ ಚೆಕ್ಕನ್ನು ಸ್ವೀಕರಿಸಿದರು.
ಬದನಾಜೆ ಶಾಲೆಯಲ್ಲಿ ಮಕ್ಕಳ ಕ್ಷೀರ ಭಾಗ್ಯ, ಅಕ್ಷರ ದಾಸೋಹ, ಶಾಲಾ ಪ್ರಾರ್ಥನೆಗೆ, ಸಭೆ ಸಮಾರಂಭಗಳಿಗೆ ಅನುಕೂಲವಾಗುವಂತೆ ಸುಮಾರು 15 ಲಕ್ಷ ವೆಚ್ಚದಲ್ಲಿ ಸಭಾಂಗಣ ರಚನೆ ಕಾರ್ಯ ಪ್ರಗತಿಯಲ್ಲಿದ್ದು,ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಕೈ ಜೋಡಿಸುತ್ತಿದ್ದಾರೆ. ಶಾಲಾ ಬೇಡಿಕೆಯನ್ನು ಮನ್ನಿಸಿ ಸಭಾಂಗಣಕ್ಕೆ ದೇಣಿಗೆ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಶಿಕ್ಷಕವೃಂದ, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾಭಿಮಾನಿಗಳು ಭಕ್ತಿ ಪೂರ್ವಕ ವಂದನೆಗಳನ್ನು ಸಲ್ಲಿಸಿದರು.