September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

ಬೆಂಗಳೂರು: ನಿನ್ನೆ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಜ.9ರಂದು ಅವರನ್ನು ಎನ್‌ಐಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ನಂತರ 6 ನಕ್ಸಲರನ್ನು ಬಿಗಿ ಪೊಲೀಸ್‌ ಬಂಧೋಬಸ್ತ್ ನಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು.

ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೂತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆರು ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

Related posts

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!