20.9 C
ಪುತ್ತೂರು, ಬೆಳ್ತಂಗಡಿ
January 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

ಉಜಿರೆ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MoE) ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ “ವೀರ್ ಗಾಥಾ”ಸ್ಪರ್ಧೆಯನ್ನು 3ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಶೌರ್ಯ ಪ್ರಶಸ್ತಿಗಳನ್ನು ಪಡೆದವರ ಶೌರ್ಯ ಮತ್ತು ಶೌರ್ಯದ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಈ ಸ್ಪರ್ಧೆಯನ್ನು ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಧೈರ್ಯ ಮತ್ತು ಪರಿಶ್ರಮದ ಮೌಲ್ಯಗಳನ್ನು ತುಂಬುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು, ದೇಶದಲ್ಲಿಯೇ ಆಯ್ಕೆ ಆಗಿರುವ ನೂರು ವಿದ್ಯಾರ್ಥಿಗಳಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಭಟ್ ಚಿತ್ರಕಲಾ ಸ್ಪರ್ಧೆಯಲ್ಲಿ ಆಯ್ಕೆ ಆಗಿದ್ದು, ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು, ರಕ್ಷಣಾ ಸಚಿವರಿಂದ ಸನ್ಮಾನಕ್ಕೆ ಭಾಜನರಾಗಿರುತ್ತಾರೆ.

ಆಯ್ಕೆಯಾಗಿರುವ ವಿದ್ಯಾರ್ಥಿಯನ್ನು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್, ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಾಲಾ ಶಿಕ್ಷಕ ವೃಂದದಿಂದ ಶುಭಹಾರೈಸಲಾಯಿತು.

Related posts

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya
error: Content is protected !!