37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಸಂದರ್ಭದಲ್ಲಿ ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಚೆಂಡೆ, ವಾದ್ಯ, ಬ್ಯಾಂಡ್ ವಾಳಗದೊಂದಿಗೆ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ತಾoಬೂಲ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,ಅಧ್ಯಕ್ಷ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ, ಹೊನ್ನಪ್ಪ ಗೌಡ ಸೋನಕುಮೇರು, ಶ್ರೀನಿವಾಸ ಗೌಡ ಬೆಳಾಲು, ಸತೀಶ್ ಗೌಡ ಎಳ್ಳುಗದ್ದೆ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಉದ್ಯಮಿ ಜಯಣ್ಣ ಮೀನoದೆಲು,ಪದ್ಮ ಗೌಡ ಬೆಳಾಲು,ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya
error: Content is protected !!