ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ 68 ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನು ಒಳಗೊಂಡ ತಂಡ ದ್ವಿತೀಯ ಸ್ಥಾನ ಪಡೆದು, ಬೆಳ್ಳಿಯ ಪದಕವನ್ನು ಗಳಿಸಿದೆ.
ತಂಡಕ್ಕೆ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕರಾದ ಗುಣಪಾಲ್ ಎಂ. ಎಸ್. ಹಾಗೂ ಸಂದೀಪ್ ಶೆಟ್ಟಿ ತರಬೇತಿ ನೀಡಿದ್ದಾರೆ.