23 C
ಪುತ್ತೂರು, ಬೆಳ್ತಂಗಡಿ
April 17, 2025
ತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ‘ಕ್ರೀಡೋತ್ಸವ’ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 800ಮೀಟರ್ ಓಟ 8ನೇ ತರಗತಿ ವಿದ್ಯಾರ್ಥಿನಿ ನಿಶಾ ತೃತೀಯ, ಗುಂಡೆಸೆತ 4ನೇ ತರಗತಿ ಯುಕ್ತ ದ್ವಿತೀಯ ಹಾಗೂ 100 ಮೀಟರ್ ಓಟದಲ್ಲಿ 4ನೇ ತರಗತಿ ಸಾಕ್ಯಶ್ರೀ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!