September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

ಉಜಿರೆ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MoE) ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ “ವೀರ್ ಗಾಥಾ”ಸ್ಪರ್ಧೆಯನ್ನು 3ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಶೌರ್ಯ ಪ್ರಶಸ್ತಿಗಳನ್ನು ಪಡೆದವರ ಶೌರ್ಯ ಮತ್ತು ಶೌರ್ಯದ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಈ ಸ್ಪರ್ಧೆಯನ್ನು ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಧೈರ್ಯ ಮತ್ತು ಪರಿಶ್ರಮದ ಮೌಲ್ಯಗಳನ್ನು ತುಂಬುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು, ದೇಶದಲ್ಲಿಯೇ ಆಯ್ಕೆ ಆಗಿರುವ ನೂರು ವಿದ್ಯಾರ್ಥಿಗಳಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಭಟ್ ಚಿತ್ರಕಲಾ ಸ್ಪರ್ಧೆಯಲ್ಲಿ ಆಯ್ಕೆ ಆಗಿದ್ದು, ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು, ರಕ್ಷಣಾ ಸಚಿವರಿಂದ ಸನ್ಮಾನಕ್ಕೆ ಭಾಜನರಾಗಿರುತ್ತಾರೆ.

ಆಯ್ಕೆಯಾಗಿರುವ ವಿದ್ಯಾರ್ಥಿಯನ್ನು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್, ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಾಲಾ ಶಿಕ್ಷಕ ವೃಂದದಿಂದ ಶುಭಹಾರೈಸಲಾಯಿತು.

Related posts

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya
error: Content is protected !!