September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಜ 07 ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾದ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಪಡ್ವೆಟ್ನಾಯರು ಸಭಾ ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಗೌಡ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಸುವರ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ, ಬೆಳ್ತಂಗಡಿ ವಕೀಲರಾದ ಧನಂಜಯ ರಾವ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅವರು ಸಮಯೋಚಿತವಾಗಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಾಜೆ, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನ ಆಡಳಿತ ಮೊಕ್ತೇಸರರಾದ ಗಣೇಶ್ ಭಟ್ ಕಾಂತಾಜೆ, ಮಂಗಳೂರು ಎಂ.ಸಿ. ಎಫ್ ಸೀನಿಯರ್ ಇಂಜಿನಿಯರ್ ಪ್ರವೀಣ್ ಗೌಡ ಅಂಗಡಿಮಜಲು, ಇವರುಗಳ ಗೌರವ ಉಪಸ್ಥಿತಿ, ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ,ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ,ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು, ವಿಜಯ ಗೌಡ ಅಧ್ಯಾಪಕರು, ಉಪಸ್ಥಿತರಿದ್ದರು.

ಅನ್ನಛತ್ರ ಸ್ಥಳದಾನಿ ಮುರಳಿ ಗೌಡ ಹಾರ್ತ್ಯಾರು, ವಾಹನ ಪಾರ್ಕಿಂಗ್ ಸ್ಥಳದಾನಿ ಶೀನಪ್ಪ ಗೌಡ ಹಾರ್ತ್ಯಾರು, ಅನ್ನಛತ್ರ ರಸ್ತೆಯ ಸ್ಥಳದಾನಿ ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ ಇವರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
ಶ್ರೀನಿವಾಸ್ ಬಾಲಂಪಾಡಿ ಸ್ವಾಗತಿಸಿ, ಅಧ್ಯಾಪಕರಾದ ಮಹೇಶ್ ಕಾರ್ಯಕ್ರಮ ನಿರ್ವಹಿಸಿ, ಚಂದ್ರಶೇಖರ್ ಸಾಲಿಯಾನ್
ಧನ್ಯವಾದವಿತ್ತರು.
ಶ್ರೀನಿವಾಸ ಗೌಡ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
error: Content is protected !!