ನಾರಾವಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 8 ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದ್ದಾರೆ.
ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು 4 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.
ಬಿಜೆಪಿ ನಾಯಕ, ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಢಾರಿ ಇವರ ನೇತೃತ್ವದ ಸಹಕಾರ ಭಾರತಿ ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿದರು.
ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸುಧಾಕರ ಭಂಢಾರಿ,ರಾಜೇಂದ್ರ ಕುಮಾರ್,ಸುಜಲತಾ,ಸುಪ್ರೀಯಾ,ಜಗದೀಶ್ ಹೆಗ್ಡೆ,ಪದ್ಮಶ್ರೀ, ಸದಾನಂದ ಗೌಡ,ಉಮೇಶ್ ಗೌಡ ಜಯಗಳಿಸಿದರು.ಕಾಂಗ್ರೇಸ್ ಬೆಂಬಲಿತಾ ಅಭ್ಯರ್ಥಿಗಳಾದ ಕೃಷ್ಣಪ್ಪ ಪೂಜಾರಿ,ಯಶೋಧ ಕುತ್ಲೂರು,ಶೇಖರ,ವಿಠಲ ಪೂಜಾರಿ ಜಯಗಳಿಸಿದರು.
ಕಳೆದ ಅವಧಿಯ ಅಧ್ಯಕ್ಷ ಚುನಾವಣೆಯಲ್ಲಿ ಸುಧಾಕರ ಭಂಢಾರಿ ಅತ್ಯಧಿಕ ಮತಗಳನ್ನು ಪಡೆದಿದ್ದರೆನ್ನಲಾಗಿದೆ.
ಜ. 11 ರಂದು ಚುನಾವಣೆ ನಡೆದಿದೆ. ಚುನಾವಣಾಧಿಕಾರಿಯಾಗಿ ವಿಲಾಸ್ ಸಹಕರಿಸಿದರು. ನಾರಾವಿ ಸಿಎ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.ಫಲಿತಾಂಶವನ್ನು ಹೈಕೋರ್ಟ್ ಆದೇಶದ ಬಳಿಕ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.