35.6 C
ಪುತ್ತೂರು, ಬೆಳ್ತಂಗಡಿ
January 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

ನಾರಾವಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 8 ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದ್ದಾರೆ.
ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು 4 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ಬಿಜೆಪಿ ನಾಯಕ, ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಢಾರಿ ಇವರ ನೇತೃತ್ವದ ಸಹಕಾರ ಭಾರತಿ ಬಿಜೆಪಿ ಬೆಂಬಲಿತ‌ 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿದರು.

ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸುಧಾಕರ ಭಂಢಾರಿ,ರಾಜೇಂದ್ರ ಕುಮಾರ್,ಸುಜಲತಾ,ಸುಪ್ರೀಯಾ,ಜಗದೀಶ್ ಹೆಗ್ಡೆ,ಪದ್ಮಶ್ರೀ, ಸದಾನಂದ ಗೌಡ,ಉಮೇಶ್ ಗೌಡ ಜಯಗಳಿಸಿದರು.ಕಾಂಗ್ರೇಸ್ ಬೆಂಬಲಿತಾ ಅಭ್ಯರ್ಥಿಗಳಾದ ಕೃಷ್ಣಪ್ಪ ಪೂಜಾರಿ,ಯಶೋಧ ಕುತ್ಲೂರು,ಶೇಖರ,ವಿಠಲ ಪೂಜಾರಿ ಜಯಗಳಿಸಿದರು.

ಕಳೆದ ಅವಧಿಯ ಅಧ್ಯಕ್ಷ ಚುನಾವಣೆಯಲ್ಲಿ ಸುಧಾಕರ ಭಂಢಾರಿ ಅತ್ಯಧಿಕ ಮತಗಳನ್ನು ಪಡೆದಿದ್ದರೆನ್ನಲಾಗಿದೆ.

ಜ. 11 ರಂದು ಚುನಾವಣೆ ನಡೆದಿದೆ. ಚುನಾವಣಾಧಿಕಾರಿಯಾಗಿ ವಿಲಾಸ್ ಸಹಕರಿಸಿದರು. ನಾರಾವಿ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.ಫಲಿತಾಂಶವನ್ನು ಹೈಕೋರ್ಟ್ ಆದೇಶದ ಬಳಿಕ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.

Related posts

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!