ಬೆಳ್ತಂಗಡಿ:ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜ ಮನೋಹರ್ ಪೂಜಾರಿಯವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಸತ್ಯಜಿತ್ ಸುರತ್ಕಲ್, ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು , ಉಪಾಧ್ಯಕ್ಷ ಸುಂದರ ಪೂಜಾರಿಯವರು, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಪ್ರಸಾದ್ ಎಂಕೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ಹಾಗೂ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.